March 21, 2026

ಬಂಟ್ವಾಳ: ಬಾರ್ ನಲ್ಲಿ ಇಬ್ಬರಿಗೆ ಚೂರಿ ಇರಿತ

0
1600x960_162218-8219107321993524403741391196040386393407488n

ಬಂಟ್ವಾಳ: ಬಾರೊಂದರಲ್ಲಿ ಕುಡಿದ ನಂತರ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಬಳಿಕ ಇರಿತಕ್ಕೊಳಗಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ.

ಯಾವುದೋ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದುಕೊಂಡಿದ್ದಾರೆ ಎನ್ನಲಾಗಿದೆ.

ಇರಿತದ ಪರಿಣಾಮ ಕಿಶೋರ್ ಹಾಗೂ ದಯಾನಂದ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಕರಣದ ಆರೋಪಿಗಳಾದ ಅರ್ಬಿಗುಡ್ಡೆ ನಿವಾಸಿಗಳಾದ ಸುಚಿತ್, ಸಚಿನ್, ಧನು ಹಾಗೂ ಪುರುಷ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!