May 18, 2026

ಕಾಪು: ವಿಪ್ರೋ ಕಂಪೆನಿಯ ಉದ್ಯೋಗಿಯಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

0
Screenshot_2022-02-11-10-22-00-13_680d03679600f7af0b4c700c6b270fe7.jpg

ಕಾಪು: ವಿಪ್ರೋ ಕಂಪೆನಿಯ ಉದ್ಯೋಗಿಯಾಗಿದ್ದ ಪಡುಬಿದ್ರಿಯ ಬ್ರಹ್ಮಸ್ಥಾನ ಬಳಿ ವಾಸವಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸೌಜನ್ಯ (22) ಎಂದು ಗುರುತಿಸಲಾಗಿದೆ.

ಸೌಜನ್ಯ ಬೆಂಗಳೂರಿನ ವಿಪ್ರೊ ಕಂಪೆನಿಗಾಗಿ ದುಡಿಯುತ್ತಿದ್ದು, ಕೊರೊನಾದಿಂದಾಗಿ ಕಳೆದ 10 ತಿಂಗಳುಗಳಿಂದ ಈಕೆ ಮನೆಯಿಂದಲೇ ಕೆಲಸ ಮಾಡಿಕೊಂಡಿದ್ದರು. ಇಂದು ತನ್ನ ತಂದೆ ತಾಯಿ ಇಬ್ಬರೂ ಸುರತ್ಕಲ್‍ಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ತಾನು ಕೆಲಸ ಮಾಡಿಕೊಂಡಿದ್ದ ಕೋಣೆಯಲ್ಲೇ ಈ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!