March 21, 2026

ಹಿಜಾಬ್ – ಕೇಸರಿ ಶಾಲು ವಿವಾದ: ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

0
image_editor_output_image1705713321-1644559836702.jpg

ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್‌ ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸೂಕ್ತ ಸಮಯದಲ್ಲಿ ಈ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಕರ್ನಾಟಕದಲ್ಲಿ ಏನಾಗುತ್ತಿದೆ ಮತ್ತು ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನು ರಾಷ್ಟ್ರೀಯ ಮಟ್ಟದ ವಿಷಯವನ್ನಾಗಿ ಮಾಡಬೇಡಿ, ಸೂಕ್ತ ಸಮಯದಲ್ಲಿ ನಾವು ಮಧ್ಯಪ್ರವೇಶ ಮಾಡುತ್ತೇವೆ ಎಂದು ಸುಪ್ರೀಂ ಕೋರ್ಟ್ ವಕೀಲರಿಗೆ ಸೂಚಿಸಿದೆ.

ವಿವಾದಿತ ಹಿಜಾಬ್- ಕೇಸರಿ ವಸ್ತ್ರ ಪ್ರಕರಣದ ಬಗ್ಗೆ ತೀರ್ಪು ಬರುವವರೆಗೂ ಶಾಲೆ ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಉಡುಪು ಧರಿಸುವಂತಿಲ್ಲ ಎಂಬ ಹೈಕೋರ್ಟ್ ನ ಮಧ್ಯಂತರ ಮೌಖಿಕ ಸೂಚನೆಯನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!