February 2, 2026

ಉಳ್ಳಾಲ ಉರೂಸ್: ಮಾರ್ಚ್ 6 ರವರೆಗೆ ಉಳ್ಳಾಲ, ಸೋಮೇಶ್ವರ ಬೀಚ್‌ಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

0
Screenshot_2022-02-11-14-45-50-91_680d03679600f7af0b4c700c6b270fe7.jpg

ಮಂಗಳೂರು: ಉಳ್ಳಾಲದ ಸಯ್ಯದ್ ಮದನಿ ದರ್ಗಾದಲ್ಲಿ ವಾರ್ಷಿಕ ಉರೂಸ್ ನಡೆಯುವುದರಿಂದ ಫೆಬ್ರವರಿ 10 ರಿಂದ ಮಾರ್ಚ್ 6 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಉಳ್ಳಾಲ ಮತ್ತು ಸೋಮೇಶ್ವರ ಬೀಚ್‌ಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಅನೇಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸ್ಥಳದಲ್ಲಿ ಜಾಗರಣೆ ಮಾಡಲಾಗುತ್ತಿದ್ದು, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ವಹಿಸಲಾಗಿದೆ. ಉಳ್ಳಾಲ, ಉಳಿಯ, ನೆಹರೂ ನಗರ, ಸೋಮೇಶ್ವರ, ಉಚ್ಚಿಲ, ಮೊಗವೀರಪಟ್ಣ, ಪೆರಿಬೈಲ್, ಬಟ್ಟಪ್ಪಾಡಿ ಬೀಚ್‌ಗಳಲ್ಲಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.

ಇನ್ನು ಕೋವಿಡ್ ನಿಯಮಗಳನ್ನು ಪಾಲಿಸುವುದನ್ನು ಮೇಲ್ವಿಚಾರಣೆ ಮಾಡಲು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರನ್ನು ಸೆಕ್ಟರ್ ಮ್ಯಾಜಿಸ್ಟ್ರೇಟ್ ಆಗಿ ನೇಮಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!