100ಕ್ಕೂ ಹೆಚ್ಚು ದಿನ ಪರಪ್ಪನ ಅಗ್ರಹಾರದಲ್ಲಿದ್ದ ನಲಪಾಡ್ ಈಗ ಯುವ ಕಾಂಗ್ರೆಸ್ ಅಧ್ಯಕ್ಷ: ಬಿಜೆಪಿ ಟೀಕೆ
ಬೆಂಗಳೂರು : ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗೆ ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.
48 ದಿನಗಳ ಕಾಲ ತಿಹಾರ್ ಜೈಲಿನಲ್ಲಿ ಕಳೆದ ನಂತರ ಕಾಂಗ್ರೆಸ್ ಪಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿತ್ತು. 100ಕ್ಕೂ ಹೆಚ್ಚು ದಿನ ಪರಪ್ಪನ ಅಗ್ರಹಾರದಲ್ಲಿ ನಲಪಾಡ್ ಈ ಹಿಂದೆ ಕಳೆದಿದ್ದರು, ಅವರನ್ನು ಈಗ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ.ನೆನಪಿಡಿ, ಇವರಿಬ್ಬರೂ ಸ್ವಾತಂತ್ರ್ಯ ಹೋರಾಟಗಾರರಲ್ಲ!!!”ಎಂದು ಬಿಜೆಪಿ ಟ್ವೀಟ್ ಮಾಡಿದೆ.
ನಲಪಾಡ್ ಅವರು ಸೋಮವಾರ ಕಚೇರಿಯಲ್ಲಿ,ಹೋಮ, ದೇವರ ಪೂಜೆ ಮತ್ತು ಮುಸ್ಲಿಮರ ಧಾರ್ಮಿಕ ಪ್ರಾರ್ಥನೆ ಮಾಡುವ ಮೂಲಕ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ ಸ್ವೀಕರಿಸಿದ್ದಾರೆ. ಅವರಿಗೆ ಸ್ಥಾನ ನೀಡುವಲ್ಲಿ ಕಾಂಗ್ರೆಸ್ ಪಕ್ಷದ ಒಳಗೆ ಭಾರಿ ಗೊಂದಲ ನಿರ್ಮಾಣವಾಗಿತ್ತು. ಅವರು ಹಲ್ಲೆ ಪ್ರಕರಣದಲ್ಲಿ ಸಿಲುಕಿದ್ದು ಅದಕ್ಕೆ ಕಾರಣವಾಗಿತ್ತು.




