February 4, 2026

ಬೆಂಗಳೂರು ನಗರದ ಸಿಟಿ ಸಿವಿಲ್‌ ಕೋರ್ಟ್‌ ಆವರಣದಲ್ಲಿ ವಕೀಲ ಜಗದೀಶ್‌ ಆಪ್ತರ ಮೇಲೆ ಹಲ್ಲೆ

0
Screenshot_2022-02-12-12-07-07-04_680d03679600f7af0b4c700c6b270fe7.jpg

ಬೆಂಗಳೂರು: ನಗರದ ಸಿಟಿ ಸಿವಿಲ್‌ ಕೋರ್ಟ್‌ ಆವರಣದಲ್ಲಿ ವಕೀಲ ಜಗದೀಶ್‌ ಮತ್ತು ಅವರ ಆಪ್ತರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಪ್ರಕರಣವೊಂದರ ಸಂಬಂಧ ಶುಕ್ರವಾರ ಬೆಳಗ್ಗೆ ಸಿಟಿ ಸಿವಿಲ್‌ ಕೋರ್ಟ್‌ಗೆ ದಾಖಲೆ ಸಲ್ಲಿಸಲು ಹೋದಾಗ ”’ಕೆಲವು ಮುಸುಕುಧಾರಿಗಳು ನನ್ನ ಹಾಗೂ ನನ್ನ ಪುತ್ರ, ಆಪ್ತರ ಮೇಲೆ ಹಲ್ಲೆ ನಡೆಸಿದ್ದಾರೆ,” ಎಂದು ಜಗದೀಶ್‌ ಆರೋಪಿಸಿದ್ದಾರೆ.

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ಮೇಲಿನ ಆರೋಪ ಕುರಿತ ನ್ಯಾಯಾಲಯ ನೀಡಿರುವ ತಡೆಯಾಜ್ಞೆ ಅರ್ಜಿ ವಿಚಾರಣೆ ಇತ್ತು . ಅರ್ಜಿ ವಿಚಾರಣೆ ಮಧ್ಯಾಹ್ನಕ್ಕೆ ಮುಂದೂಡಿದ್ದು ಈ ವೇಳೆ ನ್ಯಾಯಾಲಯದ ಆವರಣದಲ್ಲಿ ವಕೀಲ ಜಗದೀಶ್ ಅವರ ಮಗನ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಮಾತ್ರವಲ್ಲ ಜಗದೀಶ್ ಆಪ್ತರ ಮೇಲೂ ಹಲ್ಲೆ ನಡೆದಿದ್ದು, ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!