February 2, 2026

ಟ್ರಾವೆಲ್‌ ಏಜೆನ್ಸಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ

0
Screenshot_2022-02-12-14-19-25-92_680d03679600f7af0b4c700c6b270fe7.jpg

ದೇವನಹಳ್ಳಿ: ಮನೆಬಿಟ್ಟು ಬಂದಿದ್ದ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿ ಅಕ್ರಮವಾಗಿ ದೆಹಲಿಗೆ ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.

ನಾಗೇಶ್‌ ಬಂಧಿತ ಆರೋಪಿ. ಮನೆಯಲ್ಲಿ ಜಗಳ ಮಾಡಿಕೊಂಡು ಕೋಲಾರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಗೆ ಸಹಾಯ ಮಾಡುವುದಾಗಿ ನಂಬಿಸಿ ಮಾರಾಟಕ್ಕೆ ಯತ್ನಿಸಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿಸಿದು ಬಂದಿದೆ.

ಕ್ಷುಲ್ಲಕ ವಿಚಾರಕ್ಕೆ ಜಗಳ ಮಾಡಿಕೊಂಡು ಮನೆ ಬಿಟ್ಟು ಕೆಲಸ ಅರಸಿ ಯುವತಿ ಬೆಂಗಳೂರಿಗೆ ಬಂದಿದ್ದು, ಇಲ್ಲಿ ಯಾರು ಪರಿಚಯವಿಲ್ಲದ ಕಾರಣ ಮೆಜೆಸ್ಟಿಕ್‌ನಲ್ಲಿ ಒಬ್ಬಳೇ ಕುಳಿತ್ತಿದ್ದಳು. ಟ್ರಾವೆಲ್‌ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ನಾಗೇಶ್‌ ಯುವತಿಯನ್ನು ಗಮನಿಸಿ ಆಕೆ ಬಳಿ ಬಂದು ವಿಚಾರಿಸಿದ್ದಾನೆ. ಆಕೆ ನಡೆದ ಎಲ್ಲಾ ವಿಷಯವನ್ನು ಹಂಚಿಕೊಂಡಿದ್ದಾಳೆ. ಬಳಿಕ ಕೆಲಸ
ಕೊಡಿಸುವುದಾಗಿ ನಂಬಿಸಿ ಆಕೆಯನ್ನು ದೇವನಹಳ್ಳಿಗೆ ಕರೆದುಕೊಂಡು ಬಂದು ಅತ್ಯಾಚಾರವೆಸಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!