ಐಪಿಎಲ್ ಮೆಗಾ ಹರಾಜು: ವೇಗಿ ಹರ್ಷಲ್ ಪಟೇಲ್ ರನ್ನು 10.75 ಕೋಟಿಗೆ ಖರೀದಿಸಿದ ಆರ್‌ಸಿಬಿ
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ –2022 (ಐಪಿಎಲ್) ಮೆಗಾ ಹರಾಜು ಪ್ರಕ್ರಿಯೆಯಲ್ಲಿ ವೇಗಿ ಹರ್ಷಲ್ ಪಟೇಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ₹10.75 ಕೋಟಿ ನೀಡಿ ಖರೀದಿಸಿದೆ.
ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದೆ.
ಹರಾಜಿನಲ್ಲಿ ಹರ್ಷಲ್ ಪಟೇಲ್‌ಗಾಗಿ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಪೈಪೋಟಿ ಏರ್ಪಟಿತ್ತು. ಅಂತಿಮವಾಗಿ ಹರ್ಷಲ್‌ರನ್ನು ಖರೀದಿಸುವಲ್ಲಿ ಆರ್‌ಸಿಬಿ ಯಶಸ್ವಿಯಾಗಿದೆ.




