February 2, 2026

ಕಡಬ: ಶಾಲೆಯಲ್ಲಿ ನಮಾಜ್‌- ಸೌಹಾರ್ದಯುತವಾಗಿ ಸಮಸ್ಯೆ ಪರಿಹಾರ

0
IMG_20220212_202818.jpg

ಕಡಬ: ಇಲ್ಲಿನ ಅಂಕತ್ತಡ್ಕ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್ ವಿಚಾರಕ್ಕೆ ಸಂಬಂಧಿಸಿ ಶಿಕ್ಷಣಾಧಿಕಾರಿ ನೇತೃತ್ವದ ಸಭೆಯಲ್ಲಿ ವಿವಾದಕ್ಕೆ ತಾರ್ಕಿಕ ಅಂತ್ಯ ನೀಡಲಾಗಿದೆ.

ಸಭೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿ ನಿರ್ಣಯ ಕೈಗೊಳ್ಳಲಾಗಿದೆ. ಶಾಲಾ ಅವಧಿಯಲ್ಲಿ ಧಾರ್ಮಿಕ ಚಟುವಟಿಕೆ ನಡೆಸದಂತೆ ಸೂಚನೆ ಕೊಡಲಾಗಿದೆ. ಬಿಇಒ ಸೂಚನೆಗೆ ಮುಸ್ಲಿಂ ವಿದ್ಯಾರ್ಥಿಗಳ ಪೋಷಕರು ಒಪ್ಪಿಕೊಂಡಿದ್ದಾರೆ.

ಇನ್ನು ಮುಂದೆ ಶಾಲೆಯಲ್ಲಿ ನಮಾಜ್ ಮಾಡಲ್ಲವೆಂದು ಒಪ್ಪಿಗೆ ಸೂಚಿಸಿದ್ದಾರೆ. ಸಭೆಯ ನಿರ್ಣಯದ ಬಗ್ಗೆ ಜಿಲ್ಲಾ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಕೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!