February 2, 2026

ಬೈಂದೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ರವೀಂದ್ರ ಪೂಜಾರಿ ಎಂಬಾತನ ಬಂಧನ

0
IMG_20220122_113448.jpg

ಕುಂದಾಪುರ: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿ ರವೀಂದ್ರ ಪೂಜಾರಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ಆರೋಪಿ ರವೀಂದ್ರ ಪೂಜಾರಿ ಮಹೀಂದ್ರ ಮ್ಯಾಕ್ಸಿಮೋ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ. ಬೆಳಗ್ಗೆ ಹಳಗೇರಿಯಿಂದ 2 ದನ ಹಾಗೂ ಮುಳ್ಳಿಕಟ್ಟೆಯಿಂದ 2 ದನಗಳನ್ನು ಸಾಗಾಟ ಮಾಡಿದ್ದು ನಾವುಂದ ಜಲೀಲ್ ಹೇಳಿದಂತೆ ತಾನು ಸಾಗಾಟ ಮಾಡಿದ್ದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ.

ಸುಧಾಕರ ಶೆಟ್ಟಿ ನೆಲ್ಯಾಡಿ, ವೇದನಾಥ ಶೆಟ್ಟಿ, ದಿನೇಶ್ ಪೂಜಾರಿ ಮತ್ತಿತರರು ನೀಡಿದ ಮಾಹಿತಿಯಂತೆ ಪೊಲೀಸರು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ.ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!