February 2, 2026

ಶಾಲೆ ಆರಂಭ ಹಿನ್ನೆಲೆ: ನಾಳೆಯಿಂದ ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ!

0
IMG_20220213_115527.jpg

ಉಡುಪಿ: ಉಡುಪಿಯಲ್ಲಿ ಆರಂಭ ವಾದ ಹಿಜಾಬ್ ಕೇಸರಿ ಕಿಚ್ಚು ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.ನಾಳೆಯಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಫೆ.14 ರಿಂದ 19 ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ ,ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ. ಯಾವುದೇ ವ್ಯಕ್ತಿ, ಜಾತಿ ಧರ್ಮದ ವಿರುದ್ದ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ

Leave a Reply

Your email address will not be published. Required fields are marked *

error: Content is protected !!