ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಸಮುದ್ರ ತೀರದಲ್ಲಿ ಪತ್ತೆ
ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ನಾಪತ್ತೆಯಾದ ವ್ಯಕ್ತಿ ಮೃತದೇಹ ಇಂದು ಸಂಜೆ ವೇಳೆ ಪತ್ತೆಯಾಗಿದೆ.
ಸಂಕೊಳಿಗೆ ನಿವಾಸಿ ಭಾಸ್ಕರ್ ನಾಯಕ್ (32) ಮೃತರು.
ನಿನ್ನೆ ರಾತ್ರಿಯಿಂದ ನಾಪತ್ತೆಯಾದವರಿಗಾಗಿ ಮನೆಮಂದಿ ಹುಡುಕಾಟ ನಡೆಸಿದ್ದರು. ಬಳಿಕ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು.
ಇಂದು ಸಂಜೆ ವೇಳೆ ಸೋಮೇಶ್ವರ ಸಮುದ್ರ ತೀರದಲ್ಲಿ ಮೃತದೇಹ ಪತ್ತೆಯಾಗಿದೆ. ಭಾಸ್ಕರ್ ಅವರು ಮಾನಸಿಕವಾಗಿ ನೊಂದು ಆತ್ಮಹತ್ಯೆ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




