February 2, 2026

ಬಂಟ್ವಾಳ: ಬಿಜೆಪಿ ಮುಖಂಡನಿಗೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ, ಆಸ್ಪತ್ರೆಗೆ ದಾಖಲು

0
Screenshot_2021-10-27-10-20-27-72_680d03679600f7af0b4c700c6b270fe7.jpg

ಬಂಟ್ವಾಳ: ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಅವರ ಮೇಲೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ.

ಹಲ್ಲೆ ನಡೆಸಿದವರು ಬಜರಂಗದಳ ಕಾರ್ಯಕರ್ತರು ಎಂದು ಸ್ಥಳಿಯರು ದೂರಿದ್ದಾರೆ. ಗಾಯಗೊಂಡ ಪ್ರಕಾಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆ ವೇಳೆ ಪ್ರಕಾಶ್ ಅವರ ತಲೆಗೆ ಗಾಯಗಳಾಗಿದ್ದು, ಹಲ್ಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಎನ್ನಲಾಗಿದೆ. ಬಜರಂಗದಳ ಕಾರ್ಯಕರ್ತರಾಧ ನಿತಿನ್ ಬಡಗಬೆಳ್ಳೂರು ಮತ್ತು ನಿಶಾಂತ್ ಬಡಗಬೆಳ್ಳೂರು, ಪವನ್ ಕುಮ್ಡೇಲ್ ಪ್ರಕಾಶ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಹಲ್ಲೆ ನಡೆಸಿದ ಬಳಿಕ ಜನ ಸೇರಿದ್ದನ್ನು ಕಂಡು ಆರೋಪಿಗಳು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!