ಕಲ್ಲಾಕುರಿಚಿ: ಪಟಾಕಿ ಮಾರಾಟ ಅಂಗಡಿಯಲ್ಲಿ ಸ್ಪೋಟ:
ಐವರು ಮೃತ್ಯು, ಹಲವರಿಗೆ ಗಾಯ
ತಮಿಳುನಾಡು: ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯ ಶಂಕರಪುರಂ ನಗರದಲ್ಲಿ ಪಟಾಕಿ ಮಾರಾಟ ಅಂಗಡಿಯೊಂದರಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ಐವರು ಮೃತಪಟ್ಟು, ಹಲವರು ಗಾಯಗೊಂಡ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ಸ್ಪೋಟದಲ್ಲಿ ಅಂಗಡಿ ಮಾಲೀಕರೂ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಈ ಬಗ್ಗೆ ಸುದ್ದಿಸಂಸ್ಥೆಯೊಂದಕ್ಕೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ, ಪಟಾಕಿ ಅಂಗಡಿಯನ್ನು ದೀಪಾವಳಿ ಹಿನ್ನೆಲೆ ತೆರೆಯಲಾಗಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಸ್ಪೋಟದಲ್ಲಿ ಗಾಯಗೊಂಡ ಕಾರ್ಮಿಕರನ್ನು ಕಲ್ಲಾಕುರಿಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಪಟಾಕಿ ಸ್ಪೋಟ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತಪಟ್ಟಿರುವ ಕುಟುಂಬದ ಸದಸ್ಯರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದರು ಎಂದು ವರದಿ ಹೇಳಿದೆ.