ಆಟೋದಲ್ಲಿ ಗಾಂಜಾ ಮಾರಾಟ: ನಾಲ್ವರು ಆರೋಪಿಗಳ ಬಂಧನ
ಬೆಂಗಳೂರು : ಉತ್ತರ ವಿಭಾಗ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಟೋದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ಸ್ ಪೆಡ್ಲರ್‌ನನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.
ಷರೀಫ್ನಗರದ ನೂರುಲ್ಲಾ ಅಲಿಯಾಸ್ ಶಿವಕುಮಾರ್(40) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಯಿಂದ 3.30 ಕೆ.ಜಿ. ಗಾಂಜಾ ಹಾಗೂ 600 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಆರೋಪಿ ನೂರುಲ್ಲಾ, ಈ ಹಿಂದೆ ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲರ್ ಆಗಿದ್ದ ಫರಿದಾ ಎಂಬಾಕೆಯ ಸಾಕು ಮಗನಾಗಿದ್ದಾನೆ. ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಈ ಹಿಂದೆ ಪೊಲೀಸರು ಗೂಂಡಾ ಕಾಯ್ದೆ ಅಡಿ ಬಂಧಿಸಿದ್ದರು. ಸದ್ಯ ಆಕೆ ಮೃತಪಟ್ಟಿದ್ದಾಳೆ.
ಹೀಗಾಗಿ ಆಕೆಯ ದಂಧೆಯನ್ನು ಪುತ್ರ ನೂರುಲ್ಲ ಮುಂದುವರಿಸಿಕೊಂಡು ಹೋಗುತ್ತಿದ್ದಾನೆ. ಆರೋಪಿ ಕಡಿಮೆ ದರಕ್ಕೆ ಗಾಂಜಾ ಖರೀದಿಸಿ, ಬಳಿಕ ಚಿಕ್ಕ ಪೊಟ್ಟಣಗಳಿಗೆ ತುಂಬಿ ಆಟೋದಲ್ಲಿ ಹೋಗಿ ಗ್ರಾಹಕರ ಮನೆ ಅಥವಾ ಕಚೇರಿಗೆ ನೇರವಾಗಿ ಪೂರೈಕೆ ಮಾಡುತ್ತಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.




