March 21, 2026

ವಿಧಾನಮಂಡಲದ ಜಂಟಿ ಅಧಿವೇಶನ: ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ಸದಸ್ಯರ ಸಾಂಕೇತಿಕ ಪ್ರತಿಭಟನೆ

0
image_editor_output_image854263566-1644829338094.jpg

ಬೆಂಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಬರದಂತೆ ನಿರ್ಬಂಧ ಹೇರಿರುವುದು ಮತ್ತು ರಾಷ್ಟ್ರ ಧ್ವಜದ ವಿಚಾರದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಕಪ್ಪು ಪಟ್ಟಿ ಧರಿಸಿಕೊಂಡು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ನ ಎಲ್ಲ ಸದಸ್ಯರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕಲಾಪದಲ್ಲಿ ಪಾಲ್ಗೊಂಡಿದ್ದಾರೆ.

ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ ಹಿಜಾಬ್ ಧರಿಸಿಕೊಂಡೇ ಕಲಾಪದಲ್ಲಿ ಭಾಗವಹಿಸಿದ್ದಾರೆ‌.

ಶಿವಮೊಗ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಡಿ.ಎಸ್. ಅರುಣ್ ಕೇಸರಿ ಶಾಲು ಧರಿಸಿ ಜಂಟಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!