March 21, 2026

ಮಂಗಳೂರು ಸೆಂಟ್ರಲ್ ಮಾರ್ಕೆಟ್ ಬಳಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ: ಇಬ್ಬರ ಬಂಧನ

0
Screenshot_2022-02-15-10-52-52-85_680d03679600f7af0b4c700c6b270fe7.jpg

ಮಂಗಳೂರು: ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ಫೆ.13 ರಂದು ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ರೆಂಜಾಡಿಯ ಇಬ್ರಾಹಿಂ ಬಾತೀಶ್(20) ಎಂಬಾತನನ್ನು ಬಂದರ್ ಠಾಣೆಯ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ನಗರದ ಕೋಡಿಕಲ್ ಸರಕಾರಿ ಶಾಲೆಯ ಬಳಿ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ವರ್ಶೀತ್(21) ಎಂಬಾತನನ್ನು ಸೆನ್ ಪೊಲೀಸರು ಸೋಮವಾರ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

error: Content is protected !!