March 21, 2026

ಮೋತಿಹರಿ ಪಾರ್ಕ್ ನಲ್ಲಿದ್ದ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ

0
image_editor_output_image-507748843-1644918312433.jpg

ಮೋತಿಹರಿ (ಬಿಹಾರ್): ಪಾರ್ಕ್‌ ಒಂದರಲ್ಲಿದ್ದ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಕಿಡಗೇಡಿಗಳು ಸಂಪೂರ್ಣವಾಗಿ ಧ್ವಂಸಗೊಳಿಸಿರುವ ಘಟನೆ ಬಿಹಾರ್‌ದ ಮೋತಿಹರಿ ಎಂಬಲ್ಲಿ ಮಂಗಳವಾರ ನಡೆದಿದೆ.

ಪ್ರತಿಮೆ ದ್ವಂಸಗೊಂಡ ಸ್ಥಳ ಮಹಾತ್ಮಾ ಗಾಂಧಿ ಅವರು ಬ್ರಿಟೀಷರ ವಿರುದ್ಧ ಚಂಪಾರಣ್ಯ ಸತ್ಯಾಗ್ರಹ ನಡೆಸಿದ್ದ ಸ್ಥಳದಿಂದ ಅನತಿ ದೂರದಲ್ಲಿದೆ.

‘ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೋತಿಹರಿ ಪ್ರದೇಶದ ಚರಕ ಪಾರ್ಕ್‌ನಲ್ಲಿದ್ದ ಗಾಂಧಿ ಪ್ರತಿಮೆಯನ್ನು ಕಿಡಗೇಡಿಗಳು ಧ್ವಂಸಗೊಳಿಸಿ ನೆಲದ ಮೇಲೆ ಬಿಸಾಕಿ ಹೋಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಿಡಗೇಡಿಗಳ ಬಂಧನಕ್ಕೆ ಕ್ರಮ ವಹಿಸಲಾಗಿದೆ’ ಎಂದು ಚಂಪಾರಣ್ಯ ಜಿಲ್ಲಾಧಿಕಾರಿ ಶಿರ್ಸತ್ ಕಪಿಲ್ ಅಶೋಕ್ ಅವರು ತಿಳಿಸಿದ್ದಾರೆ.

ಘಟನೆಯ ಹಿಂದಿನ ದಿನ ಕೆಲ ಬಲಪಂಥೀಯ ಸಂಘಟನೆಗಳು ಸ್ಥಳದಲ್ಲಿ ಧಾರ್ಮಿಕ ಘೋಷಣೆಗಳನ್ನು ಕೂಗಿದ್ದವು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!