March 21, 2026

ಗಣರಾಜ್ಯೋತ್ಸವದ ಹಿಂಸಾಚಾರದ ಆರೋಪಿ, ನಟ: ದೀಪ್ ಸಿಧು ರಸ್ತೆ ಅಪಘಾತದಲ್ಲಿ ಮೃತ್ಯು

0
image_editor_output_image1120985582-1644972596575

ದೆಹಲಿ: 2021ರ ಕಿಸಾನ್ ಗಣರಾಜ್ಯೋತ್ಸವದ ಹಿಂಸಾಚಾರದ ಆರೋಪ ಹೊತ್ತಿರುವ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪಂಜಾಬ್ ನಟ ದೀಪ್ ಸಿಧು ಇಂದು ರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ದೆಹಲಿಯ ಕುಂಡ್ಲಿ-ಮಾನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ವೇ ಬೈಪಾಸ್‌ನಲ್ಲಿ ಅಪಘಾತ ಸಂಭವಿಸಿದೆ.

ದೀಪ್ ಸಿಧು ಪ್ರಯಾಣಿಸುತ್ತಿದ್ದ ಬಿಳಿ ಬಣ್ಣದ ಮಹಿಂದ್ರ ಸ್ಕಾರ್ಪಿಯೋ ಎಸ್‌ಯುವಿಗೆ ಟ್ರಕ್ ಅಪ್ಪಳಿಸಿ ಅಪಘಾತ ಸಂಭವಿಸಿದೆ. ಎಸ್‌ಯುವಿಯ ಬಲಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇಂದು ರಾತ್ರಿ 9.30ರ ಸಮಯದಲ್ಲಿ ದೆಹಲಿಯಿಂದ ಪಂಜಾಬ್‌ನ ಬಟಿಂಡಾಕ್ಕೆ ದೀಪ್ ಸಿಧು ಪ್ರಯಾಣಿಸುತ್ತಿದ್ದಾಗ ಈ ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ನಂತರ ದೀಪ್‌ ಸಿಧುರವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಮರಣ ಹೊಂದಿದ್ದರು ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

2021ರ ಜನವರಿ 26 ರ ಗಣರಾಜ್ಯೋತ್ಸವದಂದು ಕೆಂಪು ಕೋಟೆ ಬಳಿ ನಡೆದ ದಾಂಧಲೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿ ನಟ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ 2021ರ ಏಪ್ರಿಲ್‌ನಲ್ಲಿ ಜಾಮೀನು ಸಿಕ್ಕಿತ್ತು. ನಂತರ ಮತ್ತೆ ಬಂಧಿಸಿ ಏಪ್ರಿಲ್ ಅಂತ್ಯದಲ್ಲಿ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.


Leave a Reply

Your email address will not be published. Required fields are marked *

error: Content is protected !!