March 21, 2026

ಸುರತ್ಕಲ್: ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಮೇಲೆ ಮಂಗಳಮುಖಿಯರಿಂದ ಹಲ್ಲೆ

0
image_editor_output_image1850941959-1644991950604.jpg

ಸುರತ್ಕಲ್: ಇಲ್ಲಿನ ಎನ್ಐಟಿಕೆ ಬಳಿ ಇರುವ ಟೋಲ್ ಗೇಟ್ ವಿರುದ್ಧ ಕಳೆದ ಕೆಲವು ದಿನಗಳಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ ನಡೆದಿದೆ.

ಕಳೆದ ಮಧ್ಯರಾತ್ರಿ ಸುಮಾರು 12.30ರ ಸುಮಾರಿಗೆ ಮೊದಲು ಇಬ್ಬರು ಮಂಗಳಮುಖಿಯರು ಆಗಮಿಸಿದ್ದರು. ನಂತರ ಮಂಗಳಮುಖಿಯರ ತಂಡ ಆಗಮಿಸಿ, ಪ್ರತಿಭಟನಾ ನಿರತರಿಗೆ ಅವಾಚ್ಯ ಶಬ್ಧಗಳಿಂದ ಬಯ್ದು, ಹಲ್ಲೆಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕೂಡಲೇ ಆಸಿಫ್ ಆಪತ್ಭಾಂಧವ ಫೇಸ್ ಬುಕ್ ಲೈವ್ ವಿಡಿಯೋ ಮಾಡಿದ್ದಾರೆ. ತಂಡದಲ್ಲಿದ್ದ ಹಲವು ಮಂಗಳಮುಖಿಯರು ಬಟ್ಟೆ ಎತ್ತಿ ನರ್ತನ ಪ್ರಾರಂಭಿಸಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!