March 21, 2026

ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ್ದ ಪಶ್ಚಿಮ ಬಂಗಾಳದ ಖ್ಯಾತ ಗಾಯಕಿ ಸಂಧ್ಯಾ ಮುಖರ್ಜಿ ನಿಧನ

0
image_editor_output_image610445733-1644993083594.jpg

ಪಶ್ಚಿಮ ಬಂಗಾಳ: ಖ್ಯಾತ ಗಾಯಕಿ ಸಂಧ್ಯಾ ಮುಖರ್ಜಿ ಹೃದಯಾಘಾತದಿಂದ ನಿಧನರಾದರು.

ಅವರಿಗೆ 90 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಸಂದ್ಯಾ ಮುಖರ್ಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ (ಫೆ.15) ರಾತ್ರಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಮುಖರ್ಜಿ ಅವರು ಭಾರತೀಯ ಸಿನಿಮಾದ ಸಾವಿರಾರು ಹಾಡುಗಳಿಗೆ ದನಿಯಾಗಿದ್ದು, ಹಲವು ಆಲ್ಬಮ್‌ಗಳನ್ನು ಹೊರತಂದಿದ್ದರು. ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ 1970ರಲ್ಲೇ ಅವರು ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದರು.

ಇತ್ತೀಚೆಗೆ ಕೇಂದ್ರ ಸರ್ಕಾರ ಸಂದ್ಯಾ ಮುಖರ್ಜಿಗೆ ’ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು. ಆದರೆ ಆ ಪ್ರಶಸ್ತಿಯನ್ನು ಸಂದ್ಯಾ ಮುಖರ್ಜಿ ನಿರಾಕರಿಸಿದ್ದರು.

Leave a Reply

Your email address will not be published. Required fields are marked *

error: Content is protected !!