February 2, 2026

ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

0
BASAVARAJ-1.jpeg

ಬೆಂಗಳೂರು: ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಐಎಂಎ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಯಾರನ್ನೂ ರಕ್ಷಣೆ ಮಾಡಬಾರದು ಎಂದು ವಿಧಾನ ಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಒತ್ತಾಯ ಮಾಡಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಇದಕ್ಕೆ ಪ್ರತಿಕ್ರಿಯಿಸಿ, ಐಎಂಎ ಪ್ರಕರಣದಲ್ಲಿ ಯಾರೇ ಇದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡಿದ್ದೇವೆ. ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮೇಲೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಆಗಿದ್ದು, ಹೇಮಂತ್ ನಿಂಬಾಳ್ಕರ್ ಕೋರ್ಟ್‍ನಿಂದ ಸ್ಟೇ ತಂದಿದ್ದಾರೆ. ಸಿಬಿಐ ತನಿಖೆ ನಡೆಸುತ್ತಿದ್ದು, ಸುಪ್ರಿಂ ಕೋರ್ಟ್ ಗೆ ಹೋಗಿದೆ. ಅಲ್ಲಿನ ತೀರ್ಪು ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಮತ್ತೊಬ್ಬ ಐಪಿಎಸ್ ಅಧಿಕಾರಿ ಅಜಯ್ ಹಿಲರಿ ವಿರುದ್ಧವೂ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಈ ಬಗ್ಗೆಯೂ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!