ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ನೆಗೆಟಿವ್ ಆರ್‌ಟಿ-ಪಿಸಿಆರ್ ಅಗತ್ಯ ಇಲ್ಲ: ಸಚಿವ ಸುಧಾಕರ್
ಬೆಂಗಳೂರು: ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ಇನ್ನು ಮುಂದೆ ನೆಗೆಟಿವ್ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿ ಸಲ್ಲಿಸುವ ಅಗತ್ಯ ಇಲ್ಲ.

ಆದರೆ, ಎರಡು ಡೋಸ್ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಹೊಂದುವುದು ಕಡ್ಡಾಯ ಎಂದು ಸಚಿವ ಡಿ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
‘ಕೋವಿಡ್-19 ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿ ಕೇರಳ ಮತ್ತು ಗೋವಾದಿಂದ ರೈಲ್ವೆ, ವಿಮಾನ ಹಾಗೂ ರಸ್ತೆ ಸಾರಿಗೆ ಮತ್ತು ವೈಯಕ್ತಿಕ ವಾಹನದ ಮೂಲಕ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯನ್ನು ಸಲ್ಲಿಸುವುದನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.




