February 3, 2026

ಬಂಟ್ವಾಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್ ಮೃತ್ಯು

0
IMG_20220218_183729.jpg

ಬಂಟ್ವಾಳ: ಕೆಲ ದಿನಗಳ ಹಿಂದೆ ಬಿ.ಸಿ.ರೋಡಿನಲ್ಲಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಸ್ಕಿಡ್ ಆಗಿ ಗಾಯಗೊಂಡಿದ್ದ ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್ , ಬಿ.ಸಿ.ರೋಡ್ ನಿವಾಸಿ ಸುರೇಂದ್ರ ಮಯ್ಯ (71) ಚಿಕಿತ್ಸೆ ಫಲಕಾರಿಯಾಗದೆ ಫೆ.18ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ಇಂದಿರಾ ಸಹಿತ ಇಬ್ಬರು ಪುತ್ರರನ್ನು ಅವರು ಹೊಂದಿದ್ದರು.

ಬಂಟ್ವಾಳ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸುಮಾರು 37 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿದ್ದ ಅವರು ಫೆ.6ರಂದು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರ ಮುಂಭಾಗ ಸ್ಕೂಟರ್ ನಲ್ಲಿ ಮನೆ ಕಡೆ ಹೋಗುತ್ತಿದ್ದ ವೇಳೆ ಸ್ಕಿಡ್ ಆಗಿ ಬಿದ್ದಿದ್ದರು. ಕೂಡಲೇ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!