February 3, 2026

ಹಿಜಾಬ್ ನ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಸರಕಾರಿ ಅಧಿಕಾರಿಗಳಿಂದ ಕಿರುಕುಳ ಖಂಡನೀಯ: SMA

0
IMG-20220219-WA0000.jpg

ಮಂಗಳೂರು: ಕರ್ನಾಟಕದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್ ವಿವಾದ ನ್ಯಾಯಾಲಯದಲ್ಲಿವಿಚಾರಣೆ ನಡೆಯುತ್ತಿದ್ದರೂ ಸರಕಾರಿ ಅಧಿಕಾರಿಗಳು, ಶಿಕ್ಷಕರು, ಪೊಲೀಸ್ ಇಲಾಖೆ ಕೆಲವು ಮಾಧ್ಯಮ ಪ್ರತಿನಿಧಿಗಳು ಹಿಜಾಬ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವುದು ಅತ್ಯಂತ ಅಮಾನವೀಯವಾಗಿದೆ ಎಂದು ಕರ್ನಾಟಕ ರಾಜ್ಯ ಸುನ್ನೀ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ರಾಜ್ಯ ಉಪಾಧ್ಯಕ್ಷ ಹಾಜಿ ಹಮೀದ್ ಕೊಡುಂಗಾಯಿ ತೀವ್ರವಾಗಿ ಖಂಡಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುವ ವಸತಿ ಶಾಲೆ ಕಾಲೇಜುಗಳು ಮೌಲಾನ ಅಝಾದ್ ಮಾದರಿ ಶಾಲೆಗಳಲ್ಲಿ ತರಗತಿಗೆ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಇಲಾಖೆ ಕಾರ್ಯದರ್ಶಿ ಹೊರಡಿಸಿದ ಸುತ್ತೋಲೆಯು,ಸರ್ಕಾರ ಶಿಕ್ಷಣವನ್ನು ಕೋಮುವಾದಿಕರಣ ನಡೆಸುವ ಹುನ್ನಾರ ಎಂದು ಮನದಟ್ಟಾಗುತ್ತದೆ. ಅದೇ ರೀತಿ ನ್ಯಾಯಾಲಯದ ತೀರ್ಪನ್ನು ತಿರುಚುವ ಪ್ರಯತ್ನದ ಮೂಲಕ ವಿವಾದವನ್ನು ದಾರಿ ತಪ್ಪಿಸುತ್ತಿದೆ. ಹೊರಡಿಸಿದ ಸುತ್ತೋಲೆ ಯನ್ನು ಕೂಡಲೇ ಹಿಂಪಡೆಯಬೇಕು ಎಂದು ಸರಕಾರದ ಅಲ್ಪಸಂಖ್ಯಾತ ಇಲಾಖೆ ಕಾರ್ಯದರ್ಶಿಯನ್ನು ಆಗ್ರಹಿಸಿದ್ದಾರೆ. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಮ್ಯಾನೇಜ್ಮೆಂಟ್ ಹಾಗೂ ವಿದ್ಯಾರ್ಥಿಗಳನ್ನು ಬೀದಿಗೆ ತಂದು ಹೋರಾಟ ನಡೆಸುವುದು ಅನಿವಾರ್ಯ ವಾದಿತು ಎಂದು ಎಚ್ಚರಿಕೆ ನೀಡಿದ್ದಾರೆ.

ಮೊಹಲ್ಲಾಗಳಲ್ಲಿ ರಾಜ್ಯಾದ್ಯಂತ ಚಳುವಳಿ ಹಮ್ಮಿಕೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುವುದು ಎಂಬ ವಿಶ್ವಾಸ ನಮಗಿದೆ. ನ್ಯಾಯಾಲಯದ ತೀರ್ಪು ನೋಡಿ ಮುಂದಿನ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಅದಲ್ಲದೆ ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸದೆ ಬೀದಿಗಳಿದು ನ್ಯಾಯಕ್ಕಾಗಿ ಹೋರಾಟ ನಡೆಸಬೇಕಾಗಿದೆ. ವಿದ್ಯಾರ್ಥಿಗಳನ್ನು ಮುಂದಿಟ್ಟು ರಾಜಕೀಯ ಮಾಡಿದರೆ ಯಾವುದೇ ಪಕ್ಷವಾಗಲಿ ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗಬಹುದು ಎಂದು ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಷನ್ SMA ರಾಜ್ಯ ಉಪಾಧ್ಯಕ್ಷ ಹಾಜಿ ಹಮೀದ್ ಕೊಡುಂಗಾಯಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!