February 3, 2026

ಬಿಂದಿ, ಸಿಂಧೂರ, ಕುಂಕುಮ ಹಾಕಿ ಬಂದ ವಿದ್ಯಾರ್ಥಿಗಳನ್ನು ತಡೆಯುವಂತಿಲ್ಲ: ಶಿಕ್ಷಣ ಸಚಿವ

0
Screenshot_2022-02-19-10-26-28-31_680d03679600f7af0b4c700c6b270fe7.jpg

ಬೆಂಗಳೂರು: ಹಿಜಾಬ್ – ಕೇಸರಿ ಶಾಲು ವಿವಾದ ತಣ್ಣಗಾಗುವ ಸೂಚನೆ ಕಾಣುತ್ತಿಲ್ಲ, ಇದೀಗ ಈ ಸಂಘರ್ಷ ಸಿಂಧೂರು ಕುಂಕುಮಕ್ಕೂ ಕಾಲಿಟ್ಟಿದೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ, ಶಿಕ್ಷಣ ಸಚಿವ ಬಿ ಸಿ ನಾಗೇಶ್ , “ಸಿಂಧೂರ, ಕುಂಕುಮ, ಬಳೆ ಬಗ್ಗೆ ಪ್ರಶ್ನೆ ಬೇಡ, ಅದು ನಮ್ಮ ಸಂಸ್ಕೃತಿಯ ಪ್ರತೀಕ, ಅಲಂಕಾರಿಕ ವಸ್ತು ಅದಕ್ಕೂ ಹಿಜಾಬ್’ಗೂ ಸಂಬಂಧವಿಲ್ಲ, ಅದನ್ನು ಧರಿಸಿ ಬಂದವರನ್ನು ಶಾಲೆ-ಕಾಲೇಜುಗಳಲ್ಲಿ ತಡೆದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

“ಹಿಜಾಬ್ ಧಾರ್ಮಿಕ ಗುರುತನ್ನು ಸಂಕೇತಿಸುವ ಬಟ್ಟೆ, ಹಾಗೆಂದು ಬಿಂದಿ,ಸಿಂಧೂರ, ಕುಂಕುಮಗಳು ಅಲಂಕಾರಿಕ ವಸ್ತುಗಳನ್ನು ಧರಿಸಿ ಬಂದ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ನಿಲ್ಲಿಸಿದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದೇನೆ” ಎಂದು ಹೇಳಿದ್ದಾರೆ

“ಅಲಂಕಾರಿಕ ವಸ್ತುಗಳನ್ನು ಸ್ವ ಇಚ್ಛೆಯಿಂದ ಹಾಕಿಕೊಂಡು ಬರುತ್ತಾರೆ ಅವುಗಳು ಕಡ್ದಾಯವಲ್ಲ . ಈ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಗುವಂತೆ ತಡೆಯುವಂತಿಲ್ಲ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!