ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಫೆ. 21ರಂದು ಕಾಂಗ್ರೆಸ್ ನಿಂದ ರಾಜ್ಯಾದಾದ್ಯಂತ ಪ್ರತಿಭಟನೆ
ಬೆಂಗಳೂರು: ‘ಅಹೋರಾತ್ರಿ ಧರಣಿ ಎರಡು ದಿನ ಮುಗಿದಿದ್ದು, ಶನಿವಾರ ಕೂಡ ಮುಂದುವರೆಯಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ಶನಿವಾರ ಬೆಳಿಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಸೋಮವಾರ (ಫೆ. 21) ರಾಜ್ಯದಾದ್ಯಂತ ಎಲ್ಲ ತಾಲ್ಲೂಕುಗಳಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಿದ್ದಾರೆ. ಬಳಿಕ ಹಳ್ಳಿ ಹಳ್ಳಿಗಳಲ್ಲೂ ಹೋರಾಟ ಹಮ್ಮಿಕೊಳ್ಳುತ್ತೇವೆ’ ಎಂದರು.
‘ರಾಷ್ಟ್ರಧ್ವಜದ ಕುರಿತು ಈಶ್ವರಪ್ಪ ನೀಡಿದ್ದ ಹೇಳಿಕೆಯನ್ನು ಜನತಾ ನ್ಯಾಯಾಲಯದ ಮುಂದೆ ತೆಗೆದುಕೊಂಡು ಹೋಗುತ್ತೇವೆ. ಈಶ್ವರಪ್ಪ ನಮ್ಮ ಮೇಲೆ ಕೇಸ್ ಹಾಕಲಿ’ ಎಂದು ಸವಾಲು ಹಾಕಿದರು.




