February 2, 2026

ಪ್ರಾಂಶುಪಾಲರು ಸೇರಿ ಕೆಲವರ ವಿರುದ್ಧ ಡೆತ್‌ನೋಟ್‌ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

0
Screenshot_2022-02-19-13-17-31-60_680d03679600f7af0b4c700c6b270fe7.jpg

ಬೆಂಗಳೂರು: ನಗರದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯ ಶಾಲೆಯ ಪ್ರಾಂಶುಪಾಲರು ಸೇರಿ ಕೆಲವರ ವಿರುದ್ಧ ಡೆತ್‌ನೋಟ್‌ ಬರೆದಿಟ್ಟು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ರೈಲ್ವೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಟಿ.ದಾಸರಹಳ್ಳಿ ನಿವಾಸಿ ಕೆ.ಎಸ್‌.ರಮ್ಯಾ ಮೂರ್ತಿ (15) ಮೃತ ವಿದ್ಯಾರ್ಥಿನಿ.

ಯಶವಂತಪುರ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಮ್ಯಾ ತಂದೆ ಆಂಗ್ಲಮುದ್ರಣ ಮಾಧ್ಯಮದಲ್ಲಿ ಪೇಜ್‌ ಡಿಸೈನರ್‌ ಆಗಿದ್ದು, ತಾಯಿ ಶಿಕ್ಷಕಿಯಾಗಿದ್ದಾರೆ.

ಟಿ.ದಾಸರಹಳ್ಳಿಯಲ್ಲಿರುವ ಖಾಸಗಿ ಶಾಲೆಯಲ್ಲಿ ರಮ್ಯಾ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಐದಾರು ತಿಂಗಳ ಹಿಂದೆ ರಮ್ಯಾ ಶಾಲೆಗೆ ಸ್ನ್ಯಾಕ್ಸ್‌ ತೆಗೆದುಕೊಂಡು ಹೋಗಿದ್ದು, ಅದಕ್ಕೆ ಶಾಲಾ ಆಡಳಿತ ಮಂಡಳಿ ಆಕ್ಷೇಪಿಸಿ, ಆಕೆಯ ಪೋಷಕರನ್ನು ಕರೆಸಿ ಎಚ್ಚರಿಕೆ ನೀಡಿದ್ದರು. ಅದರಿಂದ ಬೇಸರಗೊಂಡ ಆಕೆಯ ತಾಯಿ ಮಾನವ ಹಕ್ಕುಗಳಿಗೆ ಶಾಲೆ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದ್ದರು. ಅದೇ ವಿಚಾರಕ್ಕೆ ಇದೀಗ ಶಾಲೆಯ ಪ್ರಾಂಶುಪಾಲರು ಸೇರಿ ಕೆಲವರು ಆಕೆಗೆ ಕಿರುಕುಳ ನೀಡುತ್ತಿದ್ದರು. ಅದರಿಂದ ಬೇಸರಗೊಂಡ ಆಕೆ ಗುರುವಾರ ಬೆಳಗ್ಗೆ ವಾಯುವಿಹಾರಕ್ಕೆ ಹೋಗುವಾಗ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!