ಬಿಹಾರದ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ರೈಲು..!
ಬಿಹಾರ: ಬಿಹಾರದ ರೈಲು ನಿಲ್ದಾಣದಲ್ಲಿ ನಿಂತ ರೈಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹಲವಾರು ಬೋಗಿಗಳು ಸುಟ್ಟು ಕರಕಲಾಗಿವೆ.
ಸತತ ಪರಿಶ್ರಮದಿಂದ ಅಗ್ನಿ ಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಈ ದುರ್ಘಟನೆ ಸಮಭವಿಸಿದೆ. ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಖಾಲಿ ರೈಲು ಇದಾಗಿದೆ.
ಖಾಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಭೇಟಿ ಕೊಟ್ಟು ರಕ್ಷಣಾ ಕಾರ್ಯಾಚರಣೆ ಕೈಗೊಂಡು ಬೆಂಕಿಯನ್ನು ನಂದಿಸಲಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪೂರ್ವ ಕೇಂದ್ರ ರೈಲ್ವೆ ಸಿಪಿಆರ್‌ಒ ಮಾಹಿತಿ ನೀಡಿದೆ.




