March 21, 2026

ಮೊಬೈಲ್ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ

0
n360967260164532359148727f4a4edbb6374028d114d84e144558a59cdeeffd9ca72b1dfa07e03ae37b606.jpg

ಬಳ್ಳಾರಿ: ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ತೂಲಹಳ್ಳಿ ಗ್ರಾಮದ ವಿದ್ಯಾರ್ಥಿ ನಾಗರಾಜ್ (17) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಯುವಕ.

ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ನಾಗರಾಜ ಮೊಬೈಲ್ ಕೊಡಿಸುವಂತೆ ಪೋಷಕರನ್ನು ಕೇಳಿದ್ದಾನೆ. ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಪೋಷಕರ ಮೇಲೆ ಮುನಿಸಿಕೊಂಡಿರುವ ನಾಗರಾಜ್, ಫೆ.19 ರಂದು ಮನೆಬಿಟ್ಟು ಹೋಗಿ ತಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಳಿಕ ಸಂಪೂರ್ಣ ಸುಟ್ಟು ಕರಕಲಾಗಿರುವ ನಾಗರಾಜನ ಮೃತದೇಹ ಕೊಟ್ಟೂರು ಕೆರೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!