July 3, 2026

ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ಸೃಷ್ಟಿ: ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

0
image_editor_output_image-405113267-1645422169250.jpg

ಶಿವಮೊಗ್ಗ: ವಿಶ್ವಹಿಂದೂ ಪರಿಷತ್ ಕೋಟೆ ಪ್ರಖಂಡದ ಸಹ ಕಾರ್ಯದರ್ಶಿ ಹರ್ಷ ಕೊಲೆಯ ನಂತರ ನಗರದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಶಾಲಾ ಕಾಲೇಜುಗಳಿಗೆ ಫೆ. 21 ಜಿಲ್ಲಾಡಳಿತ ರಜೆ ಘೋಷಿಸಿದೆ.

ಘಟನೆಯ ನಂತರ ಖಾಸಗಿ ಬಸ್ ನಿಲ್ದಾಣ ಸೇರಿದಂತೆ ಕೆಲವೆಡೆ ಕಿಡಿಗೇಡಿಗಳು ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲುತೂರಾಟ ನಡೆಸಿ, ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಫೆ.21ರಿಂದ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಆರೋಪಿಗಳ ಸುಳಿವು ದೊರಕಿದ್ದು ಶೀಘ್ರ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!