February 3, 2026

ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಕೊಲೆ: ಮಂಗಳೂರಿನಲ್ಲಿ ಪೊಲೀಸ್ ಪಥಸಂಚಲನ

0
image_editor_output_image1456701771-1645431043142.jpg

ಮಂಗಳೂರು: ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತನ ಕೊಲೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುವ ಎಲ್ಲ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ.

ಸೋಮವಾರ ಬೆಳಿಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹಾಗೂ ಡಿಸಿಪಿಗಳ ನೇತೃತ್ವದಲ್ಲಿ ನಗರದ ಬಳ್ಳಾಲ್ ಬಾಗ್ ವೃತ್ತ, ಎಂ.ಜಿ. ರಸ್ತೆ, ಕೆ.ಎಸ್. ರಾವ್ ರೋಡ್, ಹಂಪನಕಟ್ಟೆ ಪ್ರದೇಶದಲ್ಲಿ ಪೊಲೀಸ್ ಪಥಸಂಚಲನ ನಡೆಯಿತು.

Leave a Reply

Your email address will not be published. Required fields are marked *

error: Content is protected !!