February 3, 2026

ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ವಶಕ್ಕೆ

0
Screenshot_2022-02-21-14-24-59-27_680d03679600f7af0b4c700c6b270fe7.jpg

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಎಡಿಜಿಪಿ ಮುರುಗನ್ ಸೋಮವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ಸೆಕ್ಷನ್ ೧೪೪ ಜಾರಿ ಮಾಡಲಾಗಿದ್ದು, ಅಹಿತಕರ ಕೆಲವೆಡೆ ಅಹಿತಕರ ಘಟನೆಗಲು ನಡೆದಿದೆ. ಯಾರೇ ಆಗಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಯಾರೂ ಬೆಂಕಿ ಹಚ್ಚಬೇಡಿ, ಕಾನೂನು ಸುವ್ಯವಸ್ಥೆ ಕಾಪಾಡಲು ನೇರವಾಗಿ . ನಿಮ್ಮ ಊರನ್ನು ನೀವೇ ಬೆಂಕಿ ಹಚ್ಚಿ ಹಾಳು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿದ್ದು, ಅಲ್ಲಲ್ಲಿ ಕೆಲ ಅಹಿತಕರ ಘಟನೆ ನಡೆದಿದೆ. ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಪಡೆಗಳನ್ನು ಆಯಕಟ್ಟಿನ ಸ್ಥಳಗಲ್ಲಿ ನಿಯೋಜಿಸಲಾಗಿದೆ

Leave a Reply

Your email address will not be published. Required fields are marked *

error: Content is protected !!