ಮೇವು ಹಗರಣ ಪ್ರಕರಣ: ಲಾಲು ಪ್ರಸಾದ್ ಯಾದವ್‌ಗೆ 5 ವರ್ಷ ಜೈಲು ಶಿಕ್ಷೆ, 60 ಲಕ್ಷ ರೂ. ದಂಡ
ದೆಹಲಿ: ಮೇವು ಹಗರಣಕ್ಕೆ ಸಂಬಂಧಿಸಿದ ಡೊರಾಂಡಾ ಖಜಾನೆ ಪ್ರಕರಣದಲ್ಲಿ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 60 ಲಕ್ಷ ದಂಡವನ್ನೂ ಪಾವತಿಸಬೇಕು ಎಂದು ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.
ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಕಳೆದ ವಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಿತು.




