ಆಳವಾದ ಕಮರಿಗೆ ಬಿದ್ದ ಮದುವೆ ವಾಹನ: 14 ಮಂದಿ ಮೃತ್ಯು
ಡೆಹ್ರಾಡೂನ್: ಮದುವೆ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವಾಹನವೊಂದು ಆಳವಾದ ಕಮರಿಗೆ ಬಿದ್ದು 14 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರಾಖಂಡದಲ್ಲಿ ನಿನ್ನೆ ನಡೆದಿದೆ.
ಚಂಪಾವತ್ ಜಿಲ್ಲೆಯಲ್ಲಿ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರು ಚಂಪಾವತ್ ಜಿಲ್ಲೆಯ ತನಕ್ಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ವೇಳೆ ಮ್ಯಾಕ್ಸ್ ವಾಹನ ಆಯತಪ್ಪಿ ಕಂದಕಕ್ಕೆ ಉರುಳಿದೆ.
ಮಾಹಿತಿ ತಿಳಿದ ಪೊಲೀಸರು, ರಕ್ಷಣಾ ಪಡೆಗಳು ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.




