ಮಾಣಿಯಲ್ಲಿ ಕಾಂಗ್ರೆಸ್ ಪಕ್ಷದ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮ
ಬಂಟ್ವಾಳ: ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಬಡವರ ಪರ ಕಾರ್ಯಕ್ರಮಗಳನ್ನು ಹಾಕಿಕೊಂಡು, ದೇಶದಲ್ಲಿ ಕ್ರಾಂತಿಕಾರಿ ಬದಲಾವಣೆಗಳು ಆಗುವಲ್ಲಿ ಶ್ರಮಿಸಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.
ಮಾಣಿಯಲ್ಲಿ ನಡೆದ ಒಂದನೇ ಬೂತ್ ನ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಈಗ ಅಧಿಕಾರದಲ್ಲಿರುವ ಬಿಜೆಪಿ ಸರಕಾರ ಕೇವಲ ಸುಳ್ಳು ಹೇಳುವ ಮೂಲಕ ಜನರಿಗೆ ಮೋಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವ ಅಗತ್ಯ ಇದೆ ಎಂದು ಹೇಳಿದರು.
ಬೂತ್ ಅಧ್ಯಕ್ಷ ಮೆಲ್ವಿನ್ ಕಿಶೋರ್ ಮಾರ್ಟಿಸ್ ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಉಪಾಧ್ಯಕ್ಷ ಅಬ್ದುಲ್ ಮಜೀದ್ ಸೂರಿಕುಮೇರು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನಿರಂಜನ್ ರೈ ಕುರ್ಲೆತ್ತಿಮಾರು, ಮಾಣಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಈವರೆಗೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಶರತ್ ಪೂಜಾರಿಯವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.
ಪ್ರಮುಖರಾದ ರಾಜ್ ಕಮಲ್ ಹೆಗ್ಡೆ, ಇಬ್ರಾಹಿಂ. ಕೆ.ಮಾಣಿ, ಪ್ರೀತಿ ಡಿನ್ನಾ ಪಿರೇರಾ, ರಮಣಿ, ಮೂಸಾ ಕರೀಂ, ವಿನಯ ಕುಮಾರ್, ಸುಲೈಮಾನ್, ಮತ್ತಿತರರು ಭಾಗವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಸ್ವಾಗತಿಸಿದರು.




