February 3, 2026

ಉಳ್ಳಾಲ ಉರೂಸ್ ಸಮಾರಂಭದಲ್ಲಿ ಅವಘಡ:
ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳಿಗೆ ಗಾಯ

0
IMG-20220223-WA0004

ಉಳ್ಳಾಲ: ಉಳ್ಳಾಲದಲ್ಲಿ ನಡೆಯುತ್ತಿರುವ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮದಲ್ಲಿ  ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಇಂದು ರಾತ್ರಿ ವೇಳೆ ನಡೆದಿದೆ.

ಉರೂಸ್ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ಕುಟುಂಬದ ನಾಲ್ವರು ಮಕ್ಕಳು ಸಂತೆಯಲ್ಲಿದ್ದ ಜಾಯಿಂಟ್ ವ್ಹೀಲ್ ನಲ್ಲಿ ಆಟವಾಡುತ್ತಿದ್ದರು. ಏಕಾಏಕಿ ವ್ಹೀಲ್ ಜಾಯಿಂಟ್ ತಪ್ಪಿದ ಪರಿಣಾಮ ನಾಲ್ವರು ಮಕ್ಕಳು ಕೆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ.

ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಜನ ಜಮಾಯಿಸಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಗಾಯಾಳು ಮಕ್ಕಳನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣಾ ಪೋಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!