March 22, 2026

ಉಡುಪಿ: ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸುಟ್ಟು ಕರಕಲು

0
n361932252164558956761435cad15b95bbb9194dc4bdc71687c047b2e7469191b05c5fac4c7a3e7b8898a4.jpg

ಉಡುಪಿ: ಬೆಂಕಿ ತಗಲಿ ಖಾಸಗಿ ಬಸ್ಸೊಂದು ಸುಟ್ಟು ಕರಕಲಾದ ಘಟನೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ಬುಧವಾರ ಮುಂಜಾನೆ ನಡೆದಿದೆ.

ಖಾಸಗಿ ಬಸ್ ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಆಗಮಿಸುತ್ತಿತ್ತು. ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಬಸ್ಸಿನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಘಟನೆ ನಡೆದಿದೆ.

ಪ್ರಾರಂಭದಲ್ಲಿ ಚಾಲಕನ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಯಿತು. ಬಸ್ಸು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!