March 22, 2026

ಮಾಜಿ ಸಚಿವನ ಆಪ್ತರ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ

0
Screenshot_2022-02-23-11-28-08-09_680d03679600f7af0b4c700c6b270fe7.jpg

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿರುವ ಸ್ಟಾರ್ ಗ್ರೂಪ್ ಮಾಲೀಕ ಹಾಗೂ ಮಾಜಿ ಸಚಿವ ಚಲುವರಾಯಸ್ವಾಮಿ ಆಪ್ತ ಅಮಾನುಲ್ಲಾ ಮುರ್ತುಜಾ ಅವರ ಮನೆ ಹಾಗೂ ಕಚೇರಿಗಳ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಏಕ ಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.

ನಾಗಮಂಗಲ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್, ಮಂಡ್ಯ ರಸ್ತೆಯಲ್ಲಿರುವ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಟಾರ್ ಹ್ಯಾಚರೀಸ್ ಗ್ರೂಪ್ ಮಾಲೀಕರಾಗಿರುವ ಅಮಾನುಲ್ಲಾ ಮುರ್ತುಜಾ ಮನೆ ಹಾಗೂ ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ 20 ವಾಹನಗಳಲ್ಲಿ ಆಗಮಿಸಿ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಪರಿಶೀಲನೆಯಲ್ಲಿ ನಿರತರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!