ಉಳ್ಳಾಲದಲ್ಲಿ ಹಿಜಾಬ್ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಉಳ್ಳಾಲ: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಇಲಾಖೆಯ ಆದೇಶದಂತೆ ಹಿಜಾಬ್ ಧರಿಸಬೇಡಿ ಎಂದ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಸೂಚನೆ ನೀಡಿರುವುದಕ್ಕೆ ವಿದ್ಯಾರ್ಥಿಗಳು ಪ್ರತಿಭಟಿಸಿ, ಕಾಲೇಜು ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಇಲಾಖೆಯ ಆದೇಶದಂತೆ ಕಾಲೇಜು ಆಡಳಿತ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಹಿಜಾಬ್ ತೆಗೆದು ಬರುವಂತೆ ಸೂಚನೆ ನೀಡಿದೆ. ಈ ವೇಳೆ ವಿದ್ಯಾರ್ಥಿಗಳು ಕೋರ್ಟ್ ಆದೇಶ ಬರಲಿ ಮತ್ತೆ ನೋಡೋಣ. ಅಲ್ಲಿಯವರೆಗೆ ಹಿಜಾಬ್ ಧರಿಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.
ನಮಗೆ ಟಿ.ಸಿ ಕೊಡಿ. ಇಲ್ಲವೇ ಕೋರ್ಟ್ ಆದೇಶ ಬರುವವರೆಗೆ ರಜೆ ಕೊಡಿ ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.