ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಯ ಬಂಧನ

ಬೆಂಗಳೂರು: ಕೊಟ್ಟಿಗೆಗೆ ನುಗ್ಗಿ ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯ ಸಿಂಗಾಪುರದಲ್ಲಿ ಘಟನೆ ನಡೆದಿದೆ.
ದಾವಣಗೆರೆ ಮೂಲದ ತಿಂಡ್ಲು ನಿವಾಸಿ ವೆಂಕಟೇಶ್ ಕುಮಾರ್ (22) ಬಂಧಿತ ಆರೋಪಿ. ಈತ ಸಿಂಗಾಪುರದ ಹನುಮಂತಪ್ಪ ಎಂಬವರು ಸಾಕಿರುವ ಹಸುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ಪೊಲೀಸರಿಗೆ ಹಸುವಿನ ಮಾಲಕ ದೂರು ನೀಡಿದ್ದಾರೆ. ದೂರಿನ ಮೇರೆಗೆ ಆರೋಪಿ ವಿರುದ್ಧ ಐಪಿಸಿ 377 ಹಾಗೂ ಅನಿಮಲ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.