ರಾಜ್ಯದಲ್ಲಿ 282 ಕೊರೋನಾ ಪ್ರಕರಣ ದಾಖಲು: 13 ಮಂದಿ ಮೃತ್ಯು
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 282 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,835ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿಗೆ ಇಂದು 13 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,037ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು 349 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,40,339ಕ್ಕೆ ಏರಿಕೆಯಾಗಿದೆ. ಇನ್ನು 8,430 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,17,351 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 282 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.24ಕ್ಕೆ ಇಳಿದಿದೆ.




