October 10, 2026

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ: ಆರು ಮಂದಿಗೆ ಗಾಯ

0
IMG-20220227-WA0003.jpg

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ75ರ ಶಿರಾಡಿ ಗ್ರಾಮದ ಉದನೆಯಲ್ಲಿ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಫೆ.27ರಂದು ಬೆಳಿಗ್ಗೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್ಸಿನ ಹಿಂಬದಿಗೆ ಉದನೆಯಲ್ಲಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ೬ ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

 

ಕಾರಿನಲ್ಲಿದ್ದವರು ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಗಾಯಾಳುಗಳನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!