ಫಿಫಾ ವಿಶ್ವಕಪ್ ಟೂರ್ನಿಗೆ ರಷ್ಯಾದ ತಂಡಕ್ಕೆ ಬಹಿಷ್ಕಾರ
ಪ್ಯಾರಿಸ್: ಅಂತರರಾಷ್ಟ್ರೀಯ ಫುಟ್‌ಬಾಲ್‌ನ ಜಾಗತಿಕ ಮಂಡಳಿಯಾಗಿರುವ ಫಿಫಾ, ರಷ್ಯಾವನ್ನು ಒಕ್ಕೂಟದಿಂದ ಹೊರಹಾಕಿದೆ.
ಈ ವರ್ಷ ಕತಾರ್‌ನಲ್ಲಿ ಆಯೋಜನೆಯಾಗಲಿರುವ ವಿಶ್ವಕಪ್ ಟೂರ್ನಿಗೆ ನಡೆಯುವ ಅರ್ಹತಾ ಪಂದ್ಯಗಳಿಂದಲೂ ರಷ್ಯಾದ ತಂಡಗಳನ್ನು ಬಹಿಷ್ಕರಿಸಲಾಗಿದೆ.
ವಿವಿಧ ದೇಶಗಳ ಫುಟ್‌ಬಾಲ್ ಸಂಸ್ಥೆಗಳು, ಉಕ್ರೇನ್‌ನಲ್ಲಿ ಅತಿಕ್ರಮಣ ನಡೆಸುತ್ತಿರುವ ರಷ್ಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಫಿಫಾ ಅನ್ನು ಒತ್ತಾಯಿಸಿದ್ದವು.
ಹೀಗಾಗಿ, ಯುರೋಪ್ ಫುಟ್‌ಬಾಲ್ ಒಕ್ಕೂಟ ಆಡಳಿತ ಮಂಡಳಿಯ ಸಮನ್ವಯತೆಯೊಂದಿಗೆ ಫಿಫಾ ಸೋಮವಾರ ಈ ನಿರ್ಧಾರ ಕೈಗೊಂಡಿದೆ. ಅಂತರರಾಷ್ಟ್ರೀಯ ಟೂರ್ನಿಗಳಲ್ಲಿ ಆಡಲು ಅವಕಾಶ ನಿರಾಕರಿಸಿ, ಆ ದೇಶದ (ರಷ್ಯಾದ) ಕ್ಲಬ್‌ಗಳಿಗೂ ನಿರ್ಬಂಧ ಹೇರಲಾಗಿದೆ.
ಮುಂದಿನ ಆದೇಶದ ವರೆಗೆ ರಷ್ಯಾ ಮೇಲಿನ ನಿರ್ಬಂಧ ಮುಂದುವರಿಯಲಿದೆ ಎಂದು ಫಿಫಾ ಮತ್ತು ಅದರ ಯುರೋಪಿಯನ್ ಫುಟ್‌ಬಾಲ್ ಒಕ್ಕೂಟದ ಪ್ರತಿನಿಧಿ ತಿಳಿಸಿದ್ದಾರೆ.