ವಾಣಿಜ್ಯ ಉದ್ದೇಶದ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ
ನವದೆಹಲಿ: ಹೋಟೆಲ್, ರೆಸ್ಟೋರೆಂಟ್ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್ಪಿಜಿ ಸಿಲಿಂಡರ್ ದರ ಮಂಗಳವಾರ ದೆಹಲಿಯಲ್ಲಿ ₹105, ಕೋಲ್ಕತ್ತದಲ್ಲಿ ₹108 ಹೆಚ್ಚಳವಾಗಿದೆ.
5 ಕೆ.ಜಿಯ ಸಿಲಿಂಡರ್ ದರವು ₹27 ಏರಿಕೆಯಾಗಿದೆ. ಆದರೆ, ಗೃಹ ಬಳಕೆಯ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಹೊಸ ದರವು ಇಂದಿನಿಂದಲೇ ಜಾರಿಗೆ ಬರಲಿದೆ.
ಫೆ.1ರಂದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ₹91.50 ಕಡಿತವಾಗಿತ್ತು.