ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಶಿಬಿರ ಪೋಲಿಯೊ ಭಾನುವಾರ
ಮಾಣಿ: ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಶಿಬಿರ ಪೋಲಿಯೊ ಭಾನುವಾರ ಫೆಬ್ರವರಿ 27 ಕಾರ್ಯಕ್ರಮ ನಡೆಯಿತು.

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಶಿಬಿರವನ್ನು ಉದ್ಘಾಟಿಸಿದರು.
ವೈದ್ಯಾಧಿಕಾರಿ ಡಾ.ಶಶಿಕಲಾ, ಪಂಚಾಯತ್ ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.





