ಮಂಗಳೂರು ಮುಸ್ಲಿಮ್ ಪೇಜ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು
ಬೆಂಗಳೂರು: ಹಿಜಾಬ್ ಕುರಿತ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ವಿರುದ್ದ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ಮಂಗಳೂರು ಮುಸ್ಲಿಮ್ ಪೇಜ್ ವಿರುದ್ದ ದಕ್ಷಿಣ ವಿಭಾಗದ ಸೆನ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.
ಹಿಜಾಬ್ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದೆ. ಇದೇ ವೇಳೆ ಮಂಗಳೂರು ಮುಸ್ಲಿಂ ಪೇಸ್ ಬುಕ್ ಪೇಜ್ ನಲ್ಲಿ ಫೆ.9 ರಂದು ನ್ಯಾಯಮೂರ್ತಿಯೊಬ್ಬರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ ಎಂದು ದೂರಲಾಗಿದೆ.




