March 22, 2026

ದೇರಳಕಟ್ಟೆ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಪವನ್ ಶೆಟ್ಟಿಯ ಬಂಧನ

0
image_editor_output_image-940278623-1646198495541.jpg

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದೇರಳಕಟ್ಟೆ ಸಮೀಪದ ಮಾಡೂರು ಗ್ರಾಮದ ಪವನ್ ಶೆಟ್ಟಿ (33) ಎಂಬಾತನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.‌

ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ‌ಫೆ.22ರಂದು ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳವಾರ ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನವಾಗಿದೆ.

Leave a Reply

Your email address will not be published. Required fields are marked *

error: Content is protected !!