February 1, 2026

ವಿದೇಶದಲ್ಲಿ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳು ಇಲ್ಲಿನ ಪರೀಕ್ಷೆಯಲ್ಲಿ ಪಾಸಾಗುವುದಿಲ್ಲ: ಪ್ರಲ್ಹಾದ ಜೋಶಿ

0
Screenshot_2022-03-02-10-53-07-28_ae93b0d4e668ae3b9e42de29105ee7f0.jpg

ಬೆಳಗಾವಿ: ‘ವಿದೇಶದಲ್ಲಿ ವೈದ್ಯಕೀಯ ಪದವಿಯನ್ನು ಪಡೆದು ಬರುವ ಶೇ 90ರಷ್ಟು ವಿದ್ಯಾರ್ಥಿಗಳು ಇಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅಗತ್ಯವಿರುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ’ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಸೋಮವಾರ ಮಾತನಾಡಿದ ಸಂದರ್ಭದಲ್ಲಿ ಈ ಹೇಳಿಕೆ ನೀಡಿರುವ ಅವರು, ‘ವಿದೇಶದಲ್ಲಿನ ಹಾಗೂ ಭಾರತದಲ್ಲಿನ ವೈದ್ಯಕೀಯ ಶಿಕ್ಷಣಕ್ಕಾಗಿ ತಗಲುವ ವೆಚ್ಚ ಎಷ್ಟೇ ಇರಲಿ ಆ ಕುರಿತು ಈಗ ವಿವರವಾದ ಚರ್ಚೆ ಬೇಡ. ಆ ಚರ್ಚೆಗೆ ಇದು ಸಮಯವೂ ಅಲ್ಲ’ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!