February 1, 2026

ಕೇರಳದಲ್ಲಿ ಪ್ರವಾಹ, ಭೂಕುಸಿತ:
ಮೃತಪಟ್ಟವರ ಸಂಬಂಧಿಕರಿಗೆ 5 ಲಕ್ಷ ರೂ., ಮನೆ ಕಳೆದುಕೊಂಡವರಿಗೆ 10 ಲಕ್ಷ ರೂ. ಪರಿಹಾರ

0
image_editor_output_image1237190458-1635398439579.jpg

ತಿರುವನಂತಪುರಂ: ಕೇರಳದಲ್ಲಿ ಈಚೆಗೆ ಸಂಭವಿಸಿದ ಪ್ರವಾಹ, ಭೂಕುಸಿತಗಳಲ್ಲಿ ಮೃತಪಟ್ಟವರ ಸಂಬಂಧಿಕರಿಗೆ 5 ಲಕ್ಷ ಹಾಗೂ ಮನೆ ಕಳೆದುಕೊಂಡವರಿಗೆ 10 ಲಕ್ಷ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮೃತರ ಕುಟುಂಬಗಳಿಗೆ ನೀಡುವ ₹5 ಲಕ್ಷದ ಪೈಕಿ ₹ 4 ಲಕ್ಷವನ್ನು ರಾಜ್ಯ ವಿಪತ್ತು ಸ್ಪಂದನಾ ನಿಧಿ ಮತ್ತು ಉಳಿದ ₹1 ಲಕ್ಷವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ಅಕ್ಟೋಬರ್‌ 11ರಂದು ಉಗ್ರರೊಂದಿಗೆ ನಡೆಸಿದ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ರಾಷ್ಟ್ರೀಯ ರೈಫಲ್ ಬೆಟಾಲಿಯನ್‌ನ ವೈಶಾಖ್‌ ಎಚ್‌. ಅವರ ಕುಟುಂಬದವರಿಗೆ ಹಣಕಾಸಿನ ನೆರವು ನೀಡಲು ಸಹ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!